ಕೀರ್ತನೆ. 123. ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ, ನಿನ್ನ ಕಡೆಗೆ ಕಣ್ಣೆತ್ತಿ ನೋಡುತ್ತಾ ಪ್ರಾರ್ಥಿಸುವೆನು. ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು. ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. ಆತನ ಕರುಣೆಯನ್ನೇ ನಿರೀಕ್ಷಿಸುವೆವು. ಯೆಹೋವನೇ, ನಮಗೆ ಕರುಣೆತೋರು, ಬಹುಕಾಲದಿಂದ ನಾವು ಅವಮಾನಿತರಾಗಿದ್ದೇವೆ. ಗರ್ವಿಷ್ಠರೂ ಮೊಂಡರೂ ನಮ್ಮನ್ನು ಸಾಕಷ್ಟು ಗೇಲಿ ಮಾಡಿದ್ದಾರೆ.